ಹಂತಕರನ್ನು ಬಂಧಿಸದಿದ್ದರೆ ಉಗ್ರ ಹೋರಾಟ..?

Kannada News

29-08-2017

ಕೊಪ್ಪಳ: ಎಂ.ಎಂ.ಕಲ್ಬುರ್ಗಿ ಹಂತಕರನ್ನು ಬಂಧಿಸದ ಸರಕಾರದ ವಿರುದ್ಧ ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ವಿಚಾರವಾದಿಗಳಾದ ಎಂ.ಎ.ಕಲ್ಬುರ್ಗಿ, ಧಾಬೋಲ್ಕರ್,ಪನ್ಸಾರೆ ಹಂತಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು, ಕಲ್ಬುರ್ಗಿಯವರ ಹತ್ಯೆ ಮಾಡಿದವರನ್ನು ಬಂಧಿಸದ ಪೋಲಿಸ್ ಇಲಾಖೆ ವೈಫಲ್ಯವನ್ನು ಖಂಡಿಸಿದ್ದಾರೆ. ಹಂತಕರನ್ನು ಶೀಘ್ರ ಬಂಧಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ