ಪುತ್ಥಳಿ ನಿರ್ಮಾಣಕ್ಕೆ ಶಿಲಾನ್ಯಾಸ !

Kannada News

29-08-2017

ಮೈಸೂರು: ಡಾ.ಶ್ರೀ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಯವರ ಪುತ್ಥಳಿ ನಿರ್ಮಾಣಕ್ಕೆ, ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಿದರು. ರಾಜೇಂದ್ರ ಶ್ರೀಗಳ ಶತಮಾನೋತ್ಸವದ ನೆನಪಿಗಾಗಿ ನಿರ್ಮಿಸಲಾಗುತ್ತಿರುವ ಪುತ್ಥಳಿಯಾಗಿದ್ದು, ಸುತ್ತೂರು ವೀರ ಸಿಂಹಾಸನ ಮಠದ ಇಪ್ಪತ್ತಮೂರನೇ ಜಗದ್ಗುರಗಳಾದ ಡಾ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಶತಮಾನೋತ್ಸವದ ನೆನಪಿಗಾಗಿ ಜೆಎಸ್‌ಎಸ್ ಮಹಾವಿದ್ಯಾಪೀಠದ ಮುಂಭಾಗವಿರುವ ವೃತ್ತದಲ್ಲಿ ಶ್ರೀಗಳ ಪುತ್ಥಳಿ ನಿರ್ಮಿಸಲಾಗುತ್ತಿದೆ. ಈ ವೇಳೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ,  ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕರಾದ ಎಂ.ಕೆ ಸೋಮಶೇಖರ್, ಹಾಗೂ ಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು ಉಪಸ್ಥಿತರಿದ್ದರು.                       ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ