ಸುಲಿಗೆ ಗ್ಯಾಂಗ್ ಬಂಧನ !

Kannada News

29-08-2017

ಬೆಂಗಳೂರು: ಒಂಟಿಯಾಗಿ ಓಡಾಡುವವರನ್ನು ಗ್ಯಾಂಗ್ ಕಟ್ಟಿಕೊಂಡು ಬೆದರಿಸಿ ಸುಲಿಗೆ ಮಾಡುತ್ತಿದ್ದ, 6 ಮಂದಿ ದರೋಡೆಕೋರರನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೊಡಿಗೇಹಳ್ಳಿಯ ಸುನಿಲ್ (23), ರವಿ (23), ತೇಜು ಅಲಿಯಾಸ್ ಘನಿ (25), ಅಪ್ಪಿ ಅಲಿಯಾಸ್ ವಿನೋದ (24), ಮಾರುತಿ (24), ಸಹಕಾರ ನಗರ ಸತೀಶ್ (23) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 1 ಆಟೋ, 2 ಮೊಬೈಲ್‍ ಗಳು ಇನ್ನಿತರ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಈಶಾನ್ಯ ವಲಯ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ. ಕಳೆದ ಜುಲೈ 24 ರಂದು, ರಾತ್ರಿ ಕೊಡಿಗೇನಹಳ್ಳಿ ತಿಂಡ್ಲು ಮುಖ್ಯರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಗಿರೀಶ್ ಎಂಬುವರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು, ಎರಡೂವರೆ ಸಾವಿರ ನಗದು, 2 ಮೊಬೈಲ್ ಗಳನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಗ್ಯಾಂಗ್ ಕಟ್ಟಿಕೊಂಡು ದರೋಡೆ ನಡೆಸುತ್ತಿದ್ದ ಆರೋಪಿಗಳ ಖಚಿತ ಮಾಹಿತಿಯಾಧರಿಸಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ