ಕೊಲೆ,ಮನೆಗಳವು: ಆರೋಪಿಗಳ ಬಂಧನ !

Kannada News

29-08-2017

ಬೆಂಗಳೂರು: ಕೊಲೆ, ಮನೆಗಳವು, ವಾಹನ ಕಳವು ಕೃತ್ಯಗಳಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಹೊನ್ನಂಪಲ್ಲಿಯ ರಮೇಶ್ (26),ರಾಮಾಂಜನಿ (22), ಮಾಡಪಲ್ಲಿಯ ಲಕ್ಷ್ಮಿಪತಿ (26), ಚಂದ್ರ (23) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರಿಂದ 4 ಲಕ್ಷ 20 ಸಾವಿರ ಮೌಲ್ಯದ 100 ಗ್ರಾಂ ಚಿನ್ನಾಭರಣಗಳು, 2 ಬೈಕ್ ಗಳು ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು ಬಾಗೇಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡಪಲ್ಲಿಯಲ್ಲಿ 2013ರಲ್ಲಿ ನಡೆದಿದ್ದ ಗೋವಿಂದಯ್ಯ ಎಂಬುವರ ಕೊಲೆ ಪ್ರಕರಣವನ್ನು ಪತ್ತೆ ಹಚ್ಚಲಾಗಿದೆ. ಆರೋಪಿಗಳು ಗ್ಯಾಂಗ್ ಕಟ್ಟಿಕೊಂಡು ಮನೆಗಳವು, ವಾಹನ ಕಳವು ಕೃತ್ಯಕ್ಕಿಳಿದಿದ್ದು, ಕಳೆದ ಆಗಸ್ಟ್. 21 ರಂದು ಯಲಹಂಕದ ಮಾರುತಿ ನಗರದ ಬಾಬು ಎಂಬುವರ ಮನೆಗೆ ನುಗ್ಗಿ ಚಿನ್ನಾಭರಣಗಳನ್ನು ಕಳವು ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಯಲಹಂಕ ಪೊಲೀಸರು ಕಾರ್ಯಾಚರಣೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಈಶಾನ್ಯ ವಿಭಾಗದ ಡಿಸಿಪಿ ಎಸ್. ಗಿರೀಶ್ ತಿಳಿಸಿದ್ದಾರೆ. ಆರೋಪಿಗಳ ಬಂಧನದಿಂದ ಯಲಹಂಕದ ಮನೆಗಳವು, ಬೈಕ್ ಕಳವು ಹಾಗೂ ಯಲಹಂಕ ಉಪನಗರ ಬೈಕ್ ಕಳವು ಸೇರಿ 3 ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ. ಯಲಹಂಕ ಇನ್ಸ್ ಪೆಕ್ಟರ್ ಮಂಜೇಗೌಡ ಮತ್ತವರ ಸಿಬ್ಬಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ