ನಾಲೆಗಳಿಗೆ ನೀರು ಸ್ಥಗಿತ..?

Kannada News

30-08-2017

ಮೈಸೂರು: ಕಬಿನಿ ಜಲಾಶಯದಿಂದ ನಾಲೆಗಳಿಗೆ ಹರಿಸುತ್ತಿದ್ದ ನೀರು ಸ್ಥಗಿತಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದ ನಾಲೆಗಳಿಗೆ ಹರಿಸುತ್ತಿದ್ದ ನೀರು ಸ್ಥಗಿತಗೊಂಡಿದ್ದು ರೈತರು ಆತಂಕಕ್ಕೀಡಾಗಿದ್ದಾರೆ. ನೀರಾವರಿ ಇಲಾಖೆಯ, ಹಿರಿಯ ಅಧಿಕಾರಿಗಳ ಸೂಚನೆಯಂತೆ ಜಲಾಶಯದ ಸಿಬ್ಬಂದಿ ನೀರು ನಿಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ. 1825 ಕ್ಯೂಸೆಕ್ ನೀರನ್ನು ನಾಲೆಗಳ ಮೂಲಕ ಹರಿಸಲಾಗುತ್ತಿತ್ತು, ಆದರೆ ಜಲಾಶಯಕ್ಕೆ ಕಳೆದ ಮೂರು ದಿನದಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದರೂ, ನಾಲೆಗಳಿಗೆ ಹರಿಸುತ್ತಿದ್ದ ನೀರು ನಿಲ್ಲಿಸಿದ್ದಾರೆ ಎಂದು ರೈತರು ಆರೋಪಿಸಿದ್ದಾರೆ. ನಾಲೆಗಳಿಗೆ ನೀರು ಹರಿಸುವುದನ್ನು ನೀರಾವರಿ ಇಲಾಖೆಯ ಅಧಿಕಾರಿಗಳ ಸೂಚನೆಯ ಮೇರೆಗೆ ನಿಲ್ಲಸಿಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದು, ಕಬಿನಿ ಅಚ್ಚುಕಟ್ಟು ಪ್ರದೇಶದ ರೈತರು ಆತಂಕಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ಮೈಸೂರು ನಾಲೆಗಳಿಗೆ ನೀರು ಸ್ಥಗಿತ..?


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ