ಸಂಸದ ಸಿ.ಎಸ್.ಪುಟ್ಟರಾಜು ವಿರುದ್ಧ ದೂರು !

Kannada News

30-08-2017

ಮಂಡ್ಯ: ಮಂಡ್ಯದ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಅವರ ವಿರುದ್ಧ, ಆರ್.ಟಿ.ಐ ಕಾರ್ಯಕರ್ತ ಕೆ.ಆರ್.ರವೀಂದ್ರ ದೂರು ದಾಖಲಿಸಿದ್ದಾರೆ. ಮಂಡ್ಯದ ಆರ್.ಟಿ.ಐ ಕಾರ್ಯಕರ್ತರಾದ ಕೆ.ಆರ್.ರವೀಂದ್ರ ಅವರು ದಾಖಲೆ ಸಹಿತ ದೂರು ಸಲ್ಲಿಸಿದ್ದಾರೆ. ಅಲ್ಲದೇ ರಾಜ್ಯಪಾಲರು, ಲೋಕಾಯುಕ್ತ ನ್ಯಾಯಮೂರ್ತಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗೂ ದೂರು ನೀಡಿದ್ದಾರೆ. ತಮ್ಮ ದೂರಿನಲ್ಲಿ ಲೋಕಾಯುಕ್ತ ಸಂಸ್ಥೆ, ಪೊಲೀಸ್ ಇಲಾಖೆ ಸಿಬ್ಬಂದಿ, ಇತರೆ ಇಲಾಖೆ ಅಧಿಕಾರಿಗಳು ಮತ್ತು  ಸಿಬ್ಬಂದಿಯನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಮಾಡಿದ್ದಾರೆ. ಪುಟ್ಟರಾಜು ಶಾಸಕರಾಗಿದ್ದ ವೇಳೆ ಲೋಕಾಯುಕ್ತ ದುರ್ಬಳಕೆ, ಅಕ್ರಮ ಸ್ಪೋಟಕ ಬಳಸಿ ಸಿಪಿಐ, ಪೇದೆ ಹತ್ಯೆಗೆ ಯತ್ನ, ಮತ್ತು ಇಬ್ಬರು ಸಿಪಿಐಗಳ ಮೇಲೆ ಲೋಕಾಯುಕ್ತ ದಾಳಿ ಇವುಗಳಿಗೆ ಸಂಬಂಧಿಸಿದಂತೆ, ದಾಖಲೆ ಸಹಿತ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ