ಸಿಎಂ ಮನೆ ಮುಂದೆ ಜನರ ನೂಕುನುಗ್ಗಲು !

Kannada News

30-08-2017

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ಹಿನ್ನೆಲೆ, ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿಎಂ ನಿವಾಸದ ಬಳಿ ನೂರಾರು ಮಂದಿ ಸಾರ್ವಜನಿಕರು, ಅಹವಾಲು ಸಲ್ಲಿಸಲು ಜಮಾವಣೆಯಾಗಿದ್ದಾರೆ. ಹಲವರು ಸಿ.ಎಂ ನಿವಾಸದೊಳಕ್ಕೆ ಹೋಗಲು ಯತ್ನಿಸಿದ ವೇಳೆ, ಕೆಲಕಾಲ ನೂಕುನುಗ್ಗಲು ಉಂಟಾಗಿತ್ತು. ಪರಿಸ್ಥಿತಿ ನಿಯಂತ್ರಿಸುವ ವೇಳೆ ಪೊಲೀಸ್ ಪೇದೆಯೋಬ್ಬರು ಅವಾಚ್ಯ ಶಬ್ದ ಬಳಸಿದ್ದು, ಪೊಲೀಸ್ ಪೇದೆ ಅವಾಚ್ಯ ಶಬ್ದ ಬಳಸಿದ್ದರಿಂದ ಕುಪಿತಗೊಂಡ ಸಾರ್ವಜನಿಕರು. ಪೊಲೀಸ್ ಪೇದೆಯನ್ನು ತರಾಟೆಗೆ ತೆಗೆದುಕೊಂಡರು. ಇದಾದ ಬಳಿಕ ಏನೂ ನಡೆದಿಲ್ಲವೇನೋ ಎಂಬಂತೆ ಪೊಲೀಸ್ ಪೇದೆ ಸದ್ದಿಲ್ಲದೆ ಜಾಗ ಖಾಲಿಮಾಡಿದ್ದಾರೆ. ಮೈಸೂರು ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಮಂದಿಯಿಂದ ಅಹವಾಲುಗಳನ್ನು ಸ್ವೀಕರಿಸಿದ ಸಿಎಂ, ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿ, ಉಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ