ಸರ್ಕಾರವೇ ರೈತನನ್ನು ಕೊಲೆ ಮಾಡುತ್ತಿವೆ..?

Kannada News

30-08-2017

ಬೆಂಗಳೂರು: ರೈತರ ಕೃಷಿ ಭೂಮಿಗೆ ನೀರು, ಬೆಳೆಗೆ ನ್ಯಾಯಯುತ ಬೆಲೆ, ಸಂಪೂರ್ಣ ಸಾಲ ಮನ್ನಾ ಸೇರಿ ಇನ್ನಿತರೆ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ, ವಿಶ್ವೇಶ್ವರಯ್ಯ ಗೋಪುರ ದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಗೆ ನೂರಾರು ರೈತರು ಅರ್ಜಿ ಸಲ್ಲಿಸಿ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟುಹಿಡಿದರು. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ರೈತರ ಸಾಲ ಮನ್ನಾ ಮಾಡುವಂತೆ ಇಂದು ಪ್ರತಿಯೊಬ್ಬ ರೈತರಿಂದ ವೈಯಕ್ತಿಕವಾಗಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ರೈತರ ಸಾಲ ಮನ್ನಾಕ್ಕೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂದರು. ಕಾರ್ಪೋರೇಟ್ ಕಂಪೆನಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡುವ ಸರ್ಕಾರಗಳು ರೈತರ ಸಾಲ ಮನ್ನಾ ಮಾಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ‘ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿಲ್ಲ, ಬದಲಾಗಿ ಸರ್ಕಾರವೇ ರೈತನನ್ನು ಕೊಲೆ ಮಾಡುತ್ತಿವೆ’ ಎಂದು ಆರೋಪಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ