ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನೆ !

Kannada News

30-08-2017

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದರು. ನಗರದ ಸಿದ್ದಾರ್ಥ ಬಡಾವಣೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಲೋಕೋಪಯೋಗಿ ಇಲಾಖೆ ಅಧಿಕ್ಷಕ ಎಂಜಿನಿಯರ್ ಸತ್ಯನಾರಾಯಣ ಅವರಿಗೆ ಸೂಚಿಸಿದರು. ಬಳಿಕ ಬನ್ನೂರು ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೇರಿ ಕಟ್ಟಡದ ಕಾಮಗಾರಿಯ ಪ್ರಗತಿ ಪರಿಶೀಲಿಸಿ, ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡಿ, ನಿಗಧಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ