ಶಾಲಾ ಬಾಲಕರ ಜಗಳ: ಚಾಕು ಇರಿತ !

Kannada News

30-08-2017

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ನಡುವೆ ಸಹ ವಿದ್ಯಾರ್ಥಿಗೆ ಬಾಲಕ ಚಾಕುವಿನಿಂದ ಇರಿದಿದ್ದಾನೆ. ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪ್ರತಿಷ್ಠಿತ ಶಾಲೆಯ 10ನೆ ತರಗತಿಯ ವಿದ್ಯಾರ್ಥಿ ಈ ಕೃತ್ಯ ಎಸಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಗುರುವಾರ ಕ್ಷುಲ್ಲಕ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿತ್ತು, ಬಳಿಕ ಶಾಲೆಯಿಂದ ಹೊರ ಬಂದ ನಂತರ ಅದೇ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳದಲ್ಲಿ, ತನ್ನ ಬಳಿ ಇದ್ದ ಚಿಕ್ಕ ಚಾಕುವಿನಿಂದ ಇರಿದಿದ್ದಾನೆ. ಬಾಲಕನ ದೇಹದ ಮೂರು ಕಡೆಗಳಲ್ಲಿ ಇರಿದು ಪರಾರಿಯಾಗಿದ್ದಾನೆ. ಘಟನಾ ಸ್ಥಳದಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯು, ಪೊಷಕರಿಗೆ ಮಾಹಿತಿ ನೀಡಿದ್ದಾನೆ. ವಿದ್ಯಾರ್ಥಿಯ ಪೊಷಕರು, ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇಬ್ಬರು ಬಾಲಕರಾಗಿರುವುದರಿಂದ ಪ್ರಕರಣವನ್ನು ಬಾಲಪರಾಧಿ ಕಾಯಿದೆಯಡಿ ದಾಖಲಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ