5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ !

Kannada News

30-08-2017

ಬೆಂಗಳೂರು: ನಗರದ ಮಿಷನ್ ರಸ್ತೆಯಲ್ಲಿರುವ ಯೂನಿಟಿ ಕಟ್ಟಡದ ಐದನೇ ಮಹಡಿಯಿಂದ ಕೆಳಗೆ ಹಾರಿ, ಕೇಂದ್ರ ಸರ್ಕಾರಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ನಡೆದಿದೆ. ಆದಾಯ ತೆರಿಗೆ ಇಲಾಖೆಯಲ್ಲಿ ‘ಡಿ’ ಗ್ರೂಪ್ ನೌಕರರಾಗಿದ್ದ ಜಯರಾಂ (53)ಎಂದು ಆತ್ಮಹತ್ಯೆ ಮಾಡಿಕೊಂಡವರನ್ನು ಗುರುತಿಸಲಾಗಿದೆ. ಕೆಲಸಕ್ಕೆ ಬಂದಿದ್ದ ಜಯರಾಂ ಅವರು ಮಧ್ಯಾಹ್ನ 12ರ ವೇಳೆ ಯೂನಿಟಿ ಕಟ್ಟಡದ ಕಾಂಪ್ಲೆಕ್ಸ್ ನ 5ನೇ ಮಹಡಿಯಿಂದ ಕೆಳಗೆ ಹಾರಿದ್ದಾರೆ. ಗಂಭೀರವಾಗಿ ತಲೆಗೆ ಗಾಯಗೊಂಡ ಅವರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಯುನಿಟಿ ಬಿಲ್ಡಿಂಗ್ ಪಕ್ಕದ ಅನೇಕ್ಸ್ ಕಾಂಪ್ಲೆಕ್ಸ್ ನಲ್ಲಿ ಆದಾಯ ತೆರಿಗೆ ಕಚೇರಿಯಿದ್ದು, ಇಲ್ಲಿ ‘ಡಿ’ ಗ್ರೂಪ್ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಜಯರಾಂ ಅವರ ಆತ್ಮಹತ್ಯೆಗೆ ಕಾರಣಗಳು ತಿಳಿದುಬಂದಿಲ್ಲ. ಎಸ್.ಜೆ.ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಚಂದ್ರಗುಪ್ತ ತಿಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ