ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಜೈಕಾರ..?

Kannada News

31-08-2017

ಬೆಳಗಾವಿ: ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಎಲ್ಲರಗಿಂತ ಮೊದಲು‌ ನಾನು ಜೈ ಮಹಾರಾಷ್ಟ್ರ ಅಂತಾ ಹೇಳುವೆ ಎಂದು, ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಆಗಸ್ಟ್ 27ರಂದು ಬಸರೀಕಟ್ಟಿ ಗ್ರಾಮದಲ್ಲಿ ಮಾಡಿದ ಭಾಷಣದ ಈ ರೀತಿ ಹೇಳಿದಿದ್ದು, ಇದೀಗ ಆಡಿಯೋ ಸೋಶಿಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ನಾನೀಗ ಕರ್ನಾಟಕದಲ್ಲಿದ್ದೀನಿ, ಆದರೆ ಗಡಿ ವಿಚಾರ ಸುಪ್ರೀಂ ಕೋರ್ಟ ನಲ್ಲಿದೆ, ಪ್ರಕರಣ ಮುಗಿದು ಬೆಳಗಾವಿ ಮಹಾರಾಷ್ಟ್ರಕ್ಕೆ ಹೋಗುವುದಾದರೆ, ಎಲ್ಲರಗಿಂತ ಮೊದಲು ನಾನೇ ಮಹಾರಾಷ್ಟ್ರ ಧ್ವಜ ಹಿಡಿದು ಜೈ ಮಹಾರಾಷ್ಟ್ರ ಅಂತಾ ಹೇಳುವೆ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೇ ಯಾವನಿಗೂ ಈ ರೀತಿ‌ ಹೇಳುವ ಧೈರ್ಯವಿಲ್ಲ, ಆದರೆ ನನಗೆ ಯಾರ ಭಯವಿಲ್ಲ, ನಾನು ಯಾರಿಗೂ ಹೆದರುವುದಿಲ್ಲ, ನಾನು ಹೆದರುವುದು ಆ ಭಗವಂತನಿಗೆ ಹಾಗೂ ನನ್ನ ತಂದೆ-ತಾಯಿಗೆ ಮಾತ್ರ. ನನಗೆ ಜಾತಿ, ಧರ್ಮ, ವ್ಯಕ್ತಿಯ ಬಗ್ಗೆ ಯಾವುದೇ ನಂಬಿಕೆಯಿಲ್ಲ. ಯಾರಿಂದ ಏನೂ ಆಗಬೇಕಿಲ್ಲ, ನನಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಯಾಗಬೇಕಷ್ಟೇ ಎಂದು ವಿವಾದಾತ್ಮಕ ಭಾಷಣ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ