ವೇಶ್ಯಾವಾಟಿಕೆ: 12 ಮಂದಿ ಬಂಧನ !

Kannada News

31-08-2017

ಚಿಕ್ಕಮಗಳೂರು: ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಯು ಚಿಕ್ಕಮಗಳೂರು ಜಿಲ್ಲೆಯ, ಅರವಿಂದ್ ನಗರ, ಕಾಳಿದಾಸ ನಗರ ಸೇರಿದಂತೆ ವಿವಿಧೆಡೆ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು 12 ಮಂದಿಯನ್ನು ಬಂಧಿಸಿದ್ದಾರೆ. ಡಿಸಿಐಬಿ ಪೊಲೀಸ್ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ವೇಶ್ಯಾವಾಟಿಕೆ ಧಂದೆಗೆ ಸಹಕರಿಸಿದ ಇಬ್ಬರು ಪೇದೆಗಳಾದ, ಹುಸೇನ್ ,ಹರೀಶ್ ಎಂಬುವರು ಸೇರಿದಂತೆ, ಏಳು ಜನ ಮಹಿಳೆಯರು ಮತ್ತು ನಾಲ್ಕು ಜನ ಪುರುಷರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರಕರಣವು ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು. ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ