ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ವಜಾಗೊಳಿಸಬೇಕು

Kannada News

31-08-2017

ಕೊಪ್ಪಳ: ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಾಡ ದ್ರೋಹ ಹೇಳಿಕೆ ಖಂಡಿಸಿ, ಕೊಪ್ಪಳದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಗಂಗಾವತಿಯ ಅಂಬೇಡ್ಕರ್ ವೃತ್ತದಿಂದ, ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಕರವೇ ಕಾರ್ಯಕರ್ತರು, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಧಿಕ್ಕಾರ ಕೂಗಿದರು. ಕರವೇ ಕಾರ್ಯಕರ್ತರು ಹೆಬ್ಬಾಳ್ಕರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ನಾಡ ದ್ರೋಹ ಹೇಳಿಕೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕೂಡಲೇ ಮಹಿಳಾ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಬೇಕೆಂದು ಆಗ್ರಹಿಸಿದರು.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ