ರಾಜ್ಯ ಸರ್ಕಾರ ವಿರುದ್ಧ: ಬಿಜೆಪಿ ಬೃಹತ್ ರ‍್ಯಾಲಿ !

Kannada News

31-08-2017

ಬಾಗಲಕೋಟೆ: ಬಾಗಲಕೋಟೆ ನಗರದ ಮುಧೋಳ ಪಟ್ಟಣದಲ್ಲಿ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಬೃಹತ್ ರ‍್ಯಾಲಿ ನಡೆಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲಿನ ಗಡಿಪಾರು ಆದೇಶ ಹಾಗೂ ರಾಜ್ಯ ಸರ್ಕಾರದ ವಿರುದ್ಧ, ನಡೆದ ಬೃಹತ್ ರ‍್ಯಾಲಿಯಲ್ಲಿ, ಸಂಸದರಾದ ಪ್ರತಾಪ್ ಸಿಂಹ, ಬಿಜೆಪಿ ವಕ್ತಾರ ಸಿ.ಟಿ.ರವಿ, ಪಿಸಿ ಗದ್ದಿಗೌಡರ ಸೇರಿದಂತೆ ಇತರೆ ಬಿಜೆಪಿ ಮುಖಂಡರು ಭಾಗಿಯಾಗಿದ್ದರು. ರ‍್ಯಾಲಿಯಲ್ಲಿ, 10 ಸಾವಿರಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದು, ಮುಧೋಳದ ರನ್ನ ಕ್ರೀಡಾಂಗಣದಿಂದ ಪ್ರಮುಖ ಬೀದಿಗಳಲ್ಲಿ ಸಂಚಾರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬೆಳಗಾವಿಯ ಉತ್ತರ ವಲಯ‌ ಐಜಿಪಿ‌ ರಾಮಚಂದ್ರರಾವ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮುಂಜಾಗ್ರತ ಕ್ರಮವಾಗಿ,‌ ಪೊಲೀಸ್ ಇಲಾಖೆಯಿಂದ ನಾಲ್ಕು ಡ್ರೋನ್ ಕ್ಯಾಮರಾಗಳ ಬಳಕೆ ಮಾಡಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು  5 ಸಾವಿರಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಹಾಗೂ ಕೆ.ಎಸ್.ಆರ್.ಪಿ ಮತ್ತು ಬ್ಲ್ಯಾಕ್ ಕ್ಯಾಟ್ಸ್ ನಿಯೋಜನೆ ಮಾಡಲಾಗಿದೆ ಎಂದು ಐಜಿಪಿ‌ ರಾಮಚಂದ್ರರಾವ್ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ