ಲಕ್ಷ್ಮೀ ಹೆಬ್ಬಾಳ್ಕರ್: ಹೇಳಿಕೆ ಖಂಡಿಸುತ್ತೇನೆ !

Kannada News

31-08-2017

ಧಾರವಾಡ: ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀಡಿರುವ ವಿವಾದಾತ್ಮಕ ಹೇಳಿಕೆಯನ್ನು ಸಂಸದ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. ಧಾರವಾಡದಲ್ಲಿಂದು ಮಾತನಾಡಿದ ಅವರು, ಬೆಳಗಾವಿ ಗಡಿ ವಿವಾದ ಈಗ ನ್ಯಾಯಾಲಯದಲ್ಲಿದೆ ಅದರ ಬಗ್ಗೆ ಮಾತಾಡೋದು ಸರಿಯಲ್ಲ, ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ರೀತಿ‌ ಮಾತನಾಡಬಾರದಿತ್ತು, ಅವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದರು. ಇನ್ನು ಇದೇ ವೇಳೆ ರಾಹುಲ್ ಗಾಂಧಿಗೆ ದಲಿತರ ಮನೆ ಮಗಳ ಮದುವೆ ವಿಚಾರದ ಕುರಿತು ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್‌ ನವರೇ ಮೊದಲು ಈ ವಿವಾದ ಹುಟ್ಟು ಹಾಕಿದವರು, ಮೊದಲು ಇತರರ ಸಂಸ್ಕೃತಿ ಅರಿತು ಮಾತನಾಡಬೇಕು, ಅವರಂತೆ ನಮಗೂ ಮಾತನಾಡೋದಕ್ಕೆ ಬರುತ್ತೇ, ಆದ್ರೆ ಆ ಸಂಸ್ಕೃತಿ ನಮ್ಮದಲ್ಲ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ