ದೇವಸ್ಥಾನಕ್ಕೆ ಕನ್ನ: ವಿಗ್ರಹ-ಚಿನ್ನಾಭರಣ ಕಳವು !

Kannada News

01-09-2017

ದಕ್ಷಿಣ ಕನ್ನಡ: ದೇವಸ್ಥಾನಕ್ಕೆ‌ ನುಗ್ಗಿ ದೇವಿ ವಿಗ್ರಹ, ಸೇರಿದಂತೆ, ದೇವಿಯ ಚಿನ್ನಾಭರಣಗಳನ್ನು ಕಳವು ಮಾಡಿರುವ, ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸುಳ್ಯ ತಾಲ್ಲೂಕಿನ, ಸುಬ್ರಹ್ಮಣ್ಯದ ಮರಕತ ದುರ್ಗಾಪರಮೇಶ್ವರಿ ದೇವಸ್ಥಾನಲ್ಲಿ ಕಳ್ಳತನ ನಡೆದಿದೆ. ಕಳ್ಳರು ದೇವಿಯ ಪ್ರಾಚೀನ ವಿಗ್ರಹ, ಪ್ರಭಾವಳಿ, ಆಭರಣ ದೋಚಿ ಪರಾರಿಯಾಗಿದ್ದಾರೆ. ದೇವಸ್ಥಾನಕ್ಕೆ ಅಳವಡಿಸಿದ್ದ ಸಿಸಿಟಿವಿ ಪುಡಿಗೈದು ಕೃತ್ಯ ಎಸಗಿದ್ದಾರೆ. ಸುಮಾರು 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಹೊತ್ತೊಯ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕಾಗಮಿಸಿದ ಸುಬ್ರಹ್ಮಣ್ಯ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಕಳ್ಳರಿಗಾಗಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ