ಎಫ್‍ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ..?

Kannada News

01-09-2017

ಬೆಂಗಳೂರು: ಈಶ್ವರಪ್ಪ ಪಿಎ ವಿನಯ್ ಕಿಡ್ನಾಪ್ ಯತ್ನ ಪ್ರಕರಣಕ್ಕೆ ಸಂಬಂಧಿದಂತೆ ಪ್ರಮುಖ ಆರೋಪಿ, ಬಿಎಸ್‍ವೈ ಪಿಎ ಸಂತೋಷ್ ಹೈಕೋರ್ಟ್‍ಗೆ ಇಂದು ಅರ್ಜಿ ಸಲ್ಲಿಸಿದ್ದಾರೆ. ತನ್ನ ವಿರುದ್ಧ ಹಾಕಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್‍ಗೆ ಸಂತೋಷ್ ಅರ್ಜಿ ಸಲ್ಲಿಸಿದ್ದಾರೆ. ವಿನಯ್ ಅಪಹರಣ ಪ್ರಕರಣದಲ್ಲಿ ಸಂತೋಷ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಎಫ್‍ಐಆರ್ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಸಂತೋಷ್ ನಿರೀಕ್ಷಣಾ ಜಾಮೀನು ಪಡೆದು ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾರೆ. ಇದೀಗ ತನ್ನ ವಿರುದ್ಧ ಎಫ್‍ಐಆರ್ ರದ್ದು ಪಡಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ