ಪುರಸಭೆ ಸದಸ್ಯತ್ವ ಅನರ್ಹಗೊಳಿಸಿದ ಡಿಸಿ !

Kannada News

02-09-2017

ಹಾಸನ: ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಪುಸರಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿದ ಕಾರಣ, ಬೇಲೂರು ಪುರಸಭೆಯ ಇಬ್ಬರು ಸದಸ್ಯರ ಸದಸ್ಯತ್ವವನ್ನು ಅನರ್ಹಗೊಳಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಶ್ರೀಮತಿ ಉಮಾ ಮತ್ತು ಶ್ರೀಮತಿ ಸಲ್ಮಾ ಅಖ್ತರಿ ಪುರಸಭಾ ಸದಸ್ಯತ್ವದಿಂದ ಅನರ್ಹಗೊಂಡ ಸದಸ್ಯರು. ಕಳೆದ 19-09-2016 ರಂದು ನಡೆದಿದ್ದ ಚುನಾವಣೆಯಲ್ಲಿ ಈ ಇಬ್ಬರು ಸದಸ್ಯರು ವಿಪ್ ಉಲ್ಲಂಘಿಸಿದ್ದರು. ಆದ್ದರಿಂದ ಪುರಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ