ಹುಬ್ಬಳ್ಳಿ, ಮೈಸೂರಿನಲ್ಲೂ ಬಕ್ರೀದ್ ಸಂಭ್ರಮ !

Kannada News

02-09-2017

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಸಂಭ್ರಮದಿಂದ ಮುಸ್ಲಿಂ ಭಾಂದವರು, ಬಕ್ರಿದ್ ಹಬ್ಬ ಆಚರಣೆ ಮಾಡಿದ್ದಾರೆ. ಹಬ್ಬದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಮುಸ್ಲಿಂ ಭಾಂದವರು ನೆರೆದಿದ್ದು, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಸ್ಥಳದಲ್ಲಿ  ಶಾಸಕ ಪ್ರಸಾದ ಅಬ್ಬಯ್ಯ, ಪೊಲೀಸ್ ಆಯುಕ್ತ ಎಮ್.ಎನ್.ನಾಗರಾಜ್ ಉಪಸ್ಥಿತರಿದ್ದರು. ಈ ವೇಳೆ ಮುಸ್ಲಿಂ ಭಾಂದವರಿಗೆ ಶುಭಾಶಯಗಳನ್ನು ಹೇಳಿ ಬಕ್ರಿದ್ ಹಬ್ಬಕ್ಕೆ ಸಾಥ್ ನೀಡಿದರು.                       

ಇನ್ನು ಮೈಸೂರಿನಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ, ಮೈಸೂರಿನ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಸಾವಿರಾರು ಮುಸ್ಲಿಂರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಆಲಂಗಿಸಿಕೊಂಡು ಶುಭಾಶಯ ವಿನಿಮಯ ಮಾಡಿಕೊಂಡರು. ನಗರದ ಶಾಂತಿನಗರ, ಭಾರತ್ ನಗರ, ರಾಜೀವ್ ನಗರ, ಗೌಸಿಯಾನಗರ ಬಡಾವಣೆಗಳಲ್ಲೂ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಇನ್ನೊಂದೆಡೆ ಚಾಮರಾಜನಗರ ಜಿಲ್ಲೆಯ ಈದ್ಗಾ ಮೈದಾನದಲ್ಲಿ ಈದ್-ಉಲ್-ಜ಼ುಹಾ ಎರಡು ರಖಾತ್ ನಮಾಜ಼್ ಮಾಡುವುದರ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ