ಕಾರು ಡಿಕ್ಕಿ ವೃದ್ಧೆ ಸಾವು !

Kannada News

02-09-2017

ಬೆಂಗಳೂರು: ಯಶವಂತಪುರದ ಮತ್ತಿಕೆರೆಯಲ್ಲಿ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಚರ್ಚ್‍ಗೆ ಹೋಗಿ ವಾಪಸ್ ಮನೆಗೆ ನಡೆದುಕೊಂಡು ಬರುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮತ್ತಿಕೆರೆಯ ಅಲೆಯಮ್ಮಾ ಜೋಕಬ್ (74)ಎಂದು ಗುರುತಿಸಲಾಗಿದೆ. ನಿನ್ನೆ ಬೆಳಿಗ್ಗೆ ಮನೆಯ ಹತ್ತಿರದ ಚರ್ಚ್‍ಗೆ ಹೋಗಿ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಹಿಂದಿನಿಂದ ಬಂದ ಅಲ್ಟೊ ಕಾರ್ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಮೃತಪಟ್ಟಿದ್ದಾರೆ. ಈ ಅಪಘಾತ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಕಾರು ಚಾಲಕನಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ