ಕಾರು-ಬೈಕ್ ಮುಖಾಮುಖಿ ಡಿಕ್ಕಿ !

Kannada News

04-09-2017

ರಾಮನಗರ: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆಯು ರಾಮನಗರದಲ್ಲಿ ನಡೆದಿದೆ. ಕೆಂಪೇಗೌಡನಗರ ನಿವಾಸಿಗಳಾದ ಶಶಾಂಕ್ ಮತ್ತು ಮನೋಜ್ ಮೃತ ದುರ್ದೈವಿಗಳು. ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಸಾತನೂರು ರಸ್ತೆಯ ಮಹದೇಶ್ವರ ದೇವಸ್ಥಾನದ ಬಳಿ ಈ ಅಪಘಾತ ಸಂಭವಿಸಿದೆ. ಇನ್ನು ಅಪಘಾತ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವು ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ