ಹೈಟೆಕ್ ವೇಶ್ಯಾವಾಟಿಕೆ: 8 ಮಂದಿ ಬಂಧನ !

Kannada News

04-09-2017

ಮೈಸೂರು: ಮೈಸೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ ಪತ್ತೆಮಾಡಿರುವ ನಜರ್ ಬಾದ್ ಠಾಣೆ ಪೊಲೀಸರು, 8 ಮಂದಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಹೈಟೆಕ್ ವೇಶ್ಯಾವಾಟಿಕೆ ದಂಧೆಯು, ಮೈಸೂರಿನ ರಾಘವೇಂದ್ರ ನಗರದ ಜನತಾ ಕಾಲೋನಿಯಲ್ಲಿ ನಡೆಯುತ್ತಿದ್ದು, ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು, ದಂಧೆಯಲ್ಲಿ ತೊಡಗಿದ್ದ, 8 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೊಬೈಲ್ ಗಳು ಮತ್ತು ಗಾಂಜಾ ವಶಪಡಿಸಿಕೊಂಡಿದ್ದಾರೆ. ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.                       ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ