ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ..?

Kannada News

04-09-2017

ಹಾಸನ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯ, ಹಾಸನದ ಹೊಳೆನರಸೀಪುರ ತಾಲ್ಲೂಕು, ಹಳೇಕೋಟೆ ಸರ್ಕಲ್ ಬಳಿ ನಡೆದಿದೆ. ಸ್ಥಳದಲ್ಲಿ ಮೊಬೈಲ್ ಫೋನ್, ಕೈಯಲ್ಲಿದ್ದ ಉಂಗುರ ಹಾಗೇ ಬಿಟ್ಟು ಹೋಗಿರುವ ದುಷ್ಕರ್ಮಿಗಳು, ಹಳೇ ವೈಷಮ್ಯದಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹೊಳೆನರಸೀಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಪಕ್ಕದಲ್ಲಿ ಮದ್ಯದ ಬಾಟಲ್, ಲೋಟ ಪತ್ತೆಯಾಗಿವೆ, ಕುಡಿದ ಮತ್ತಿನಲ್ಲಿ ಹತ್ಯೆ ಮಾಡಿರಬಹುದೆಂದು ಹೇಳಲಾಗುತ್ತಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ