ಹಾವು ಕಚ್ಚಿ ಬಾಲಕ ಸಾವು !

Kannada News

04-09-2017

ಹಾಸನ: ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯು ಹಾಸನ ಜಿಲ್ಲೆಯ ಗುಡ್ಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುದೀಪ್ (14) ಸಾವಿಗೀಡಾದ ಮೃತ ಬಾಲಕ. ಹೊಲದಲ್ಲಿ ಕೃಷಿ ಕೆಲಸ ಮಾಡುವಾಗ ಈ ದುರ್ಘಟನೆ ಸಂಭವಿಸಿದೆ. ಹಾವು ಕಚ್ಚಿದ್ದ ಬಾಲಕನನ್ನು ಹಳ್ಳಿ ಮೈಸೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ತರ್ತು ಚಿಕಿತ್ಸೆಗೆ ದಾಖಲಿಸಲಾಗಿತ್ತು. ನಂತರ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ, ಹೊಳೆನರಸೀಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾನೆ. ಬಾಲಕ, ತಾಲ್ಲೂಕಿನ ಮಳಲಿ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಶಾಲೆಗೆ ರಜೆಯಿದ್ದ ಹಿನ್ನೆಲೆ ಊರಿಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸುದೀಪನ ಚಿಕ್ಕಂದಿನಲ್ಲಿಯೇ ತಾಯಿ ಅನಾರೋಗ್ಯದಿಂದ ಸಾವಿಗೀಡಾಗಿದ್ದರು, ಇದೀಗ ಹಾವಿನ ರೂಪದಲ್ಲಿ ಬಾಲಕನನ್ನು ಬಲಿತೆಗೆದುಕೊಂಡಿದೆ. ಘಟನೆಯಿಂದ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

ಹಾಸನ ಹಾವು ಕಚ್ಚಿ ಬಾಲಕ ಸಾವು !


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ