ಒಂದೇ ತಿಂಗಳಲ್ಲಿ 49 ಮಕ್ಕಳ ಸಾವು !

Kannada News

04-09-2017

ನವದೆಹಲಿ: ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಗಳು ಮಕ್ಕಳ ಪಾಲಿಗೆ ಮೃತ್ಯುಕೂಪಗಳಾಗಿವೆ. ಗೋರಖ್ ಪುರದಲ್ಲಿ ಸಂಭವಿಸಿದ ಮಕ್ಕಳ ಸಾವಿನ ಸರಣಿ ಜನರ ಸ್ಮೃತಿಪಟಲದಿಂದ ಮರೆಯಾಗುವ ಮುನ್ನವೇ ಫರುಕ್ಕಾಬಾದ್ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ ಆಮ್ಲಜನಕದ ಕೊರತೆಯಿಂದ 9 ಮಂದಿ ಮಕ್ಕಳು ಮೃತಪಟ್ಟಿದ್ದಾರೆ. ಕಳೆದ ಒಂದು ತಿಂಗಳಿನಲ್ಲಿ ಆಮ್ಲಜನಕ ಕೊರತೆಯಿಂದ ಮೃತಪಟ್ಟವರ ಸಂಖ್ಯೆ 49ಕ್ಕೆ ಏರಿದೆ.

ಆಮ್ಲಜನಕ ಕೊರತೆಯಿಂದ 69 ಮಕ್ಕಳು ಮೃತಪಟ್ಟು ಗೋರಖ್ ಪುರ ಸರ್ಕಾರಿ ಆಸ್ಪತ್ರೆ ಘಟನೆಯ ನೆನಪು ಮಾಸುವ ಮುನ್ನವೇ ಉತ್ತರ ಪ್ರದೇಶದ ಫರುಕ್ಕಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯ ಕಾರಣದಿಂದ ಮಕ್ಕಳು ಮೃತಪಟ್ಟಿರುವ ಘಟನೆ, ಉತ್ತರ ಪ್ರದೇಶ ಸರ್ಕಾರವನ್ನು ಮತ್ತೊಮ್ಮೆ ತಲೆತಗ್ಗಿಸುವಂತೆ ಮಾಡಿದೆ. ಕಳೆದ ಒಂದು ತಿಂಗಳಲ್ಲಿ ಫರುಕ್ಕಾಬಾದ್ ಆಸ್ಪತ್ರೆಯಲ್ಲಿ 49 ಮಕ್ಕಳು ಮೃತಪಟ್ಟಿದ್ದಾರೆ. ಇದಕ್ಕೆ ಆಮ್ಲಜನಕ ಕೊರತೆ ಕಾರಣ ಎಂದು ವರದಿಯಾಗಿದೆ. ಈ ಘಟನೆಯ ಬಗ್ಗೆ ಜಿಲ್ಲಾಧಿಕಾರಿ ತನಿಖೆಗೆ ಆದೇಶಿಸಿದ್ದಾರೆ ಮತ್ತು ಸರ್ಕಾರಿ ಆಸ್ಪತ್ರೆಯ ಉನ್ನತ ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪದಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಉತ್ತರ ಪ್ರದೇಶದ ಎರಡು ಸರ್ಕಾರಿ ಆಸ್ಪತ್ರೆಗಳ ಮಕ್ಕಳ ವಾರ್ಡ್‌ನಲ್ಲಿ ಆಮ್ಲಜನಕ ಕೊರತೆಯಿಂದಲೇ ಮಕ್ಕಳು ಮೃತಪಟ್ಟಿರುವ ಪ್ರಕರಣಗಳು ಮುಖ್ಯಮಂತ್ರಿಯಾಗಿ ಆದಿತ್ಯ ನಾಥ್ ನೇತೃತ್ವದ ಸರ್ಕಾರವನ್ನು ಭಾರೀ ಒತ್ತಡಕ್ಕೆ ತಳ್ಳಿವೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ