ಕಾನೂನು ಮೀರಿ ನಡೆದರೆ ಕಠಿಣ ಕ್ರಮ !

Kannada News

04-09-2017

ಬೆಂಗಳೂರು: ಸುಳ್ಳು ಆರೋಪಗಳಿಗೆಲ್ಲ ಪ್ರತಿಕ್ರಿಯೆ ನೀಡುವುದಿಲ್ಲ. ಐಟಿಯವರು ತನಿಖೆ ನಡೆಸಲಿ ಆಮೇಲೆ ನೋಡೋಣ ಎಂದು ತಮ್ಮ ಎಂದಿನ ಶೈಲಿಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. ಆರ್.ಟಿ.ಐ ಕಾರ್ಯಕರ್ತರೊಬ್ಬರು ತಮ್ಮ ವಿರುದ್ಧ ರಾಜ್ಯಪಾಲರಿಗೆ, ಐಟಿ ಇಲಾಖೆಗೆ ದೂರು ನೀಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸುಳ್ಳು ದಾಖಲಾತಿಗಳಿಗೆಲ್ಲ ಪ್ರತಿಕ್ರಿಯಿಸಲು ಆಗುವುದಿಲ್ಲ. ಐಟಿ ಅಧಿಕಾರಿಗಳು ತನಿಖೆ ನಡೆಸಲಿ ನೋಡೋಣ ಎಂದರು.

ಆರ್.ಟಿ.ಐ ಕಾರ್ಯಕರ್ತ ರಾಮಮೂರ್ತಿ ತಮ್ಮ ಕುಟುಂಬದವರ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದಾರೆ. ಈ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಸುಳ್ಳು ದೂರಿಗೆಲ್ಲ ನಾನು ಹೆದರುವವನಲ್ಲ ಇದಕ್ಕೆ ಪ್ರತಿಕ್ರಿಯೆ ನೀಡುವ ಅಗತ್ಯವೂ ಇಲ್ಲ ಎಂದು ಹೇಳಿದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸಲು ಎಲ್ಲರಿಗೂ ಅವಕಾಶವಿದೆ. ಆದರೆ ಕಾನೂನು ಮೀರಿ ವರ್ತಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ