ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಘರ್ಷಣೆ

Kannada News

05-09-2017

ಮೈಸೂರು: ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ ಹಾಗೂ ಶಾಂತಿನಗರ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಘರ್ಷಣೆ ಉಂಟಾಗಿದ್ದು, ಬಿಗುವಿನ‌ ಪರಿಸ್ಥಿತಿ ನಿರ್ಮಾಣವಾಗಿದೆ. ಘರ್ಷಣೆಯಲ್ಲಿ ಹಲವರಿಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೈಸೂರು ಜಿಲ್ಲೆಗೆ ಹೊಂದಿಕೊಂಡಿರುವ ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರದಲ್ಲಿ ಎರಡು ಕೋಮಿನ ಯುವಕರ ನಡುವೆ ಉಂಟಾದ ಘರ್ಷಣೆಯ ಬೆನ್ನಲ್ಲೇ ಮೈಸೂರು ತಾಲ್ಲೂಕಿನ ರಮ್ಮನಹಳ್ಳಿ, ಶಾಂತಿನಗರ ಗ್ರಾಮಗಳಲ್ಲೂ ಎರಡು ಕೋಮಿನ ಯುವಕರ ನಡುವೆ ಘರ್ಷಣೆ ಏರ್ಪಟ್ಟಿದೆ. ಸುದ್ದಿ ತಿಳಿದು‌ ಸ್ಥಳಕ್ಕೆ ದೌಡಾಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಗಳ ತಂಡ. ಎರಡೂ ಗ್ರಾಮಗಳಲ್ಲೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ