ಗೌರಿ ಲಂಕೇಶ್ ಹತ್ಯೆ ಖಂಡಿಸಿ ಪ್ರತಿಭಟನೆ !

Kannada News

06-09-2017

ರಾಮನಗರ: ಹಿರಿಯ ಪತ್ರಕರ್ತೆ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ  ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ರಾಮನಗರದ ಚನ್ನಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಗೌರಿ ಲಂಕೇಶ್ ಹತ್ಯೆಯ ಹಿಂದೆ ಕೋಮು ಸಂಘಟನೆಗಳ ಕೈವಾಡ ಇದೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಹುನ್ನಾರ. ವಿಚಾರವಾದಿಗಳಿಗೆ ರಕ್ಷಣೆ ನೀಡಲು ರಾಜ್ಯ ಸರಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೂಡಲೇ ಹಂತಕರನ್ನು ಬಂಧಿಸಬೇಕು. ಪತ್ರಕರ್ತರಿಗೆ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ. ಮೊದಲು ಕಲಬುರ್ಗಿ ಈಗ ಗೌರಿ ಲಂಕೇಶ್ ಹೀಗೆ ನ್ಯಾಯದ ಪರ ಹೋರಾಡುವವರನ್ನು ಗುಂಡಕ್ಕಿ ಕೊಲ್ಲುವುದಾದರೆ, ಅನ್ಯಾಯ ಅಕ್ರಮಗಳನ್ನು  ಹತ್ತಿಕ್ಕುವವರು ಯಾರು? ರಾಜ್ಯಾ ಸರ್ಕಾರ ಏನು ಮಾಡುತ್ತಿದೆ ಎಂದು ಆಕ್ರೋಶದಿಂದ ನುಡಿದರು. ಕೂಡಲೇ ಹಂತಕರನ್ನು ಬಂಧಿಸಬೇಕು. ಕಲಬುರ್ಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ