ಬೈಕ್ ರ‍್ಯಾಲಿ: ಬಿಜೆಪಿ ಕಾರ್ಯಕರ್ತರ ಬಂಧನ !

Kannada News

06-09-2017

ಮಂಡ್ಯ: ಮಂಗಳೂರು ಚಲೋಗೆ ತೆರಳುತ್ತಿದ್ದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮಂಗಳೂರಿಗೆ ಚಲೋಗೆಂದು ಬೈಕ್‌ ನಲ್ಲಿ ತೆರಳಲು ಯುವಕರು ಮುಂದಾಗಿದ್ದರು, ಬೈಕ್ ರ‍್ಯಾಲಿಗೆ ನಿಷೇಧ ಹಿನ್ನೆಲೆ ಐವತ್ತಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಬಂಧಿತರನ್ನು ಪಟ್ಟಣದ ಸಂಚಾರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ