ಮೈಸೂರಿನಲ್ಲಿ ನಿಷೇಧಾಜ್ಞೆ ಜಾರಿ !

Kannada News

06-09-2017

ಮೈಸೂರು: ಮಂಗಳೂರು ಚಲೋ ಬೈಕ್ ರ‍್ಯಾಲಿ ಹಿನ್ನೆಲೆ, ಮೈಸೂರಿನಲ್ಲಿ ಪೊಲೀಸ್ ಬಿಗಿ ಭಧ್ರತೆ ಕೈಗೊಂಡಿದ್ದಾರೆ. ಮೈಸೂರು ಅರಮನೆ, ಕೋಟೆ ಆಂಜನೇಯ ದೇವಾಲಯ ಸುತ್ತಲಿನ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಮಾಡಲಾಗಿದೆ.  ಮುಂಜಾನೆಯಿಂದಲೇ ಪೊಲೀಸರು, ಗಸ್ತು ಕಾರ್ಯ ನಿರ್ವಹಿಸುತ್ತಿದ್ದಾರೆ. ಮೈಸೂರು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದೆ.  ಮೈಸೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಗೆ, ಪೊಲೀಸ್ ಆಯುಕ್ತ ಸುಬ್ರಹ್ಮಣ್ಯೇಶ್ವರ ರಾವ್ ಅವರು, ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಸಿ.ಆರ್.ಪಿ.ಸಿ ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇಗುಲದ ಮುಂಭಾಗದಿಂದ ಬೈಕ್ ರ‍್ಯಾಲಿ ಆರಂಭಿಸಲು ಅನುಮತಿ ನಿರಾಕರಿಸಿದ್ದು, ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೋಟೆ ಆಂಜನೇಯ ಸ್ವಾಮಿ ದೇಗುಲದ ಮುಂಭಾಗದಿಂದಲ್ಲೇ ರ‍್ಯಾಲಿ ಆರಂಭಿಸಲು ಬಿಜೆಪಿ ಯುವ ಮೋರ್ಚಾ ನಿರ್ಧಾರ ಮಾಡಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಭಾರೀ ಸಂಖ್ಯೆಯಲ್ಲಿ ಸಿಬ್ಬಂದಿ ನಿಯೋಜಿಸಿಲಾಗಿದೆ, ಮತ್ತು ಇಡೀ ಜಿಲ್ಲೆಗೆ ಅನ್ವಯವಾಗುವಂತೆ ನಿಷೇಧಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆ ನಡುವೆಯೂ ಮಂಗಳೂರು ಚಲೋ ಬೈಕ್ ರ‍್ಯಾಲಿ ನಡೆಸಲು ಬಿಜೆಪಿ ಯುವಮೋರ್ಚಾ ಯತ್ನಿಸುವ ಸಾಧ್ಯತೆ ಇದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ