ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ !

Kannada News

06-09-2017

ಕೊಪ್ಪಳ: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಕೊಪ್ಪಳದಲ್ಲಿ ಪ್ರಗತಿ ಪರ ಹೊರಾಟಗಾರರು ಹಾಗೂ ಪತ್ರಕರ್ತರು ಪ್ರತಿಭಟನೆ ನಡೆಸಿದ್ದಾರೆ. ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಮೂರು ದಿನಗಳಲ್ಲಿ ಆರೊಪಿಗಳನ್ನು ಬಂಧಿಸಬೇಕು ಇಲ್ಲದಿದ್ದರೆ ಉಗ್ರ ಹೊರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ. ವಿಚಾರವಾದಿಗಳ ಹಂತಕರನ್ನು ಬಂಧಿಸದ ಸರಕಾರದ ವಿರುದ್ಧ, ಪ್ರತಿಭಟನಾಕಾರರು, ದಿಕ್ಕಾರ ಕೂಗಿ, ಕೂಡಲೆ ಹಂತಕರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ