ಸಿದ್ರಾಮಯ್ಯ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲ..?

Kannada News

06-09-2017

ಮಂಗಳೂರು: ಗೌರಿ ಲಂಕೇಶ್ ಹತ್ಯೆ ಕುರಿತಂತೆ, ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿದ್ದು, ನಿರಂತರವಾಗಿ ಇಂತಹ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ, ಗೌರಿ ಲಂಕೇಶ್ ಅವರ ಹತ್ಯೆಯನ್ನು ನಾನು ಖಂಡಿಸುತ್ತೇನೆ ಎಂದರು. ನಿರ್ಭೀತಿಯಿಂದ ಕೆಲಸ ಮಾಡುತ್ತಿದ್ದ ಗೌರಿ ಹತ್ಯೆಯ ಆರೋಪಿಗಳನ್ನು ಕೂಡಲೆ ಬಂಧಿಸಬೇಕು, ಸಿದ್ದರಾಮಯ್ಯ ಸರ್ಕಾರದಲ್ಲಿ ಯಾರಿಗೂ ರಕ್ಷಣೆ ಇಲ್ಲ ಎನ್ನುವುದು ಇದರಿಂದ ಅರ್ಥವಾಗುತ್ತದೆ ಎಂದು ಕಿಡಿಕಾರಿದರು. ಒಂದು ಸರ್ಕಾರದ ಮೊದಲ ಆದ್ಯ ಕರ್ತವ್ಯ ಕಾನೂನು ಸುವ್ಯವಸ್ಥೆ ಕಾಪಾಡುವುದು, ಆದರೆ ಇದರ ಕಡೆಗೆ ಯಾವುದೇ ಗಮನವನ್ನ ಈ ರಾಜ್ಯದ ಮುಖ್ಯಮಂತ್ರಿ ಕೊಡುತ್ತಿಲ್ಲ, ಇದಕ್ಕೆ ಗೌರಿ ಲಂಕೇಶ್ ಹತ್ಯೆ ಒಂದು ತಾಜಾ ಉದಾಹರಣೆ ಎಂದು ಆರೋಪಿಸಿದರು. ತನಿಖೆ ಮಾಡಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಎಂದು ಹೇಳಿದ್ದಾರೆ. ಗೌರಿ ಲಂಕೇಶ್ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುವೆ ಎಂದರು. ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ