ಮನೆಗಳ್ಳರ ಬಂಧನ: 9ಲಕ್ಷ ಚಿನ್ನಾಭರಣ ವಶ !

Kannada News

06-09-2017

ಬೆಂಗಳೂರು: ಬೀಗ ಹಾಕಿದ ಮನೆಗಳನ್ನು ಗುರುತಿಸಿ, ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಶ್ರೀರಾಮಪುರ ಪೊಲೀಸರು 9 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಪಿ. ಅಗ್ರಹಾರದ ಅರುಣ್ ಕುಮಾರ್ ಅಲಿಯಾಸ್ ಲೊಂಡಿ (24) ಮತ್ತು ರಾಜ್ ಕುಮಾರ್ (23) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 5 ಸಾವಿರ ರೂ. ನಗದು ಸೇರಿ 9 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಕಳೆದ ಆಗಸ್ಟ್ 26 ರಂದು ರಾಮಚಂದ್ರಪುರದ ನಂದಗೋಪಿ ಎಂಬುವವರ ಮನೆಯ ಬೀಗ ಮುರಿದು ಒಳನುಗ್ಗಿ ಚಿನ್ನ, ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿರುವ ಶ್ರೀರಾಮಪುರ ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ