ರೈಲಿಗೆ ಸಿಲುಕಿ ವ್ಯಕ್ತಿ ಸಾವು !

Kannada News

06-09-2017

ಬೆಂಗಳೂರು: ನೆಲಮಂಗಲ ತಾಲೂಕಿನ ರೈಲ್ವೆ ಗೊಲ್ಲಹಳ್ಳಿ ಗ್ರಾಮದ ರೈಲ್ವೆ ಹಳಿಯ ಬಳಿ ರೈಲಿಗೆ ಸಿಕ್ಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ನೆಲಮಂಗಲ ನಿವಾಸಿ ಗಂಗಣ್ಣ (60) ಮೃತ ವ್ಯಕ್ತಿಯಾಗಿದ್ದಾರೆ. ಗಂಗಣ್ಣ ತುಮಕೂರು ಕಡೆಯಿಂದ ಬಂದ ರೈಲಿಗೆ ಸಿಲುಕಿದ್ದು, ಇವರು ರೈಲ್ವೆ ಹಳಿಯ ಬಳಿ ಓಡಾಡುತ್ತಿದ್ದ ಕಾರಣ ಸ್ಥಳೀಯರಿಗೆ ಆತ್ಮಹತ್ಯೆ ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಯಶವಂತಪುರ ರೈಲ್ವೆ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ