ಪತ್ರಕರ್ತೆ ಹತ್ಯೆ: ಮುಂದುವರೆದ ಪ್ರತಿಭಟನೆ !

Kannada News

07-09-2017

ಹುಬ್ಬಳ್ಳಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ, ಬಳ್ಳಾರಿಯಲ್ಲಿ ಪ್ರತಿಭಟನೆ ಮುಂದುವರೆದಿದೆ. ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್‌ ಹಾಗೂ ಕರ್ನಾಟಕ ನವನಿರ್ಮಾಣ ಸೇನೆಯಿಂದ, ಚನ್ನಮ್ಮ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೆ ಮೌನ ಮೆರವಣಿಗೆ ಮಾಡಿ ಪ್ರತಿಭಟಿಸಿದ್ದಾರೆ. ಪತ್ರಕರ್ತರಿಗೆ, ವಿಚಾರವಾದಿಗಳಿಗೆ ರಕ್ಷಣೆ ನೀಡದ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣವನ್ನು ಕೂಡಲೇ ಸಿಬಿಐಗೆ ವಹಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ತಹಶೀಲ್ದಾರ ಶಶಿಧರ ಮಾಡ್ಯಾಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ