ಸಕ್ಕರೆ ಕಾರ್ಖಾನೆ ಖಾಸಗೀಕರಣ !

Kannada News

07-09-2017

ಮೈಸೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರದ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ವಹಿಸಲು ನಿರ್ಧರಿಸಲಾಗಿದೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಒಂದು ಹಂತದ ಇತ್ಯರ್ಥವಾಗಿ ಕಾರ್ಮಿಕರಿಗೆ 14 ಕೋಟಿ ನೀಡಲು ನಿರ್ಧರಿಸಲಾಗಿದೆ. ಕಾರ್ಖಾನೆಯನ್ನು ಗುತ್ತಿಗೆ ಆಧಾರದ ಮೇಲೆ ಖಾಸಗಿಯವರಿಗೆ ವಹಿಸಲು ಕೂಡಲೇ ಟೆಂಡರ್ ಕರೆಯಲು ಸಿಎಂ ಸೂಚಿಸಿದ್ದಾರೆ. ಸಂಕಷ್ಟದಲ್ಲಿರುವ ಕಾರ್ಖಾನೆ ಕಾರ್ಮಿಕರಿಗೆ ರಕ್ಷಣೆ ಒದಗಿಸಬೇಕಿದೆ. ಹೀಗಾಗಿ 154 ಕಾರ್ಮಿಕರಿಗೆ ಒಂದು ಹಂತದ ಇತ್ಯಾರ್ಥವಾಗಿ ಹಣ ನೀಡಲು ಸಿಎಂ ಆದೇಶಿಸಿದ್ದಾರೆ. ಅಲ್ಲದೇ ಮಂಡ್ಯ ಜಿಲ್ಲೆಯ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಆ ಭಾಗದ ಶಾಸಕರು, ಸಹಕಾರ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ