ಆಯತಪ್ಪಿ ಬಿದ್ದ ಯುವಕ ಸಾವು !

Kannada News

07-09-2017

ಬೆಂಗಳೂರು: ನಗರದ ಕಾಮಾಕ್ಷಿಪಾಳ್ಯದ ನೈಸ್ ರಸ್ತೆಯಲ್ಲಿ ಬುಧವಾರ ರಾತ್ರಿ ಮಾವನ ಮನೆಗೆ ಸ್ಕೂಟರ್‍ ನಲ್ಲಿ ವೇಗವಾಗಿ ಹೋಗುತ್ತಿದ್ದ ಯುವಕನೋರ್ವ, ಆಯತಪ್ಪಿ ಬಿದ್ದು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಮೃತಪಟ್ಟವರನ್ನು ಕೋಡಿಯಾಲದ ನಾಗರಾಜ್(28)ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ನಾಗರಾಜ್ ಅವರು, ರಾತ್ರಿ 7.30ರ ವೇಳೆ ಕೆಲಸ ಮುಗಿಸಿಕೊಂಡು ಮಾವನ ಮನೆಗೆ ಡಿಯೋ ಸ್ಕೂಟರ್‍ ನಲ್ಲಿ ನೈಸ್ ರಸ್ತೆಯ ಸೊಂಪುರ ಟೋಲ್ ಬಳಿ ಹೋಗುತ್ತಿದ್ದಾಗ ಆಯತಪ್ಪಿ ಕೆಳಗೆಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ