ಎರಡು ಲಾರಿಗಳು ಮುಖಾಮುಖಿ ಡಿಕ್ಕಿ !

Kannada News

08-09-2017

ಉತ್ತರ ಕನ್ನಡ: ಸಿಮೆಂಟ್ ಲಾರಿ ಮತ್ತು ಮೀನು ತುಂಬಿಕೊಂಡ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸಿಮೆಂಟ್ ಲಾರಿ ಕಂದಕಕ್ಕೆ ಬಿದ್ದ ಘಟನೆಯು, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ತಾಲ್ಲೂಕಿನ ಅರೆಬೈಲ್ ಘಟ್ಟದ ಬಳಿ , ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಸಿಮೆಂಟ್ ತುಂಬಿಕೊಂಡು ಅತೀ ವೇಗವಾಗಿ ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ, ತಿರುವಿನಲ್ಲಿ ವಾಹನ ನಿಯಂತ್ರಿಸಲು ಸಾಧ್ಯವಾಗದೇ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸಿಮೆಂಟ್ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.  ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ