‘ಗಂಜಿ ಗಿರಾಕಿಯ ಹೆಣ ಬಿತ್ತು’ ಎಂದವನ ಬಂಧನ !

Kannada News

08-09-2017

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೌರಿ ಲಂಕೇಶ್ ಸಾವನ್ನು ಸಂಭ್ರಮಿಸಿದ್ದ ಮಲ್ಲಿ ಅರ್ಜುನ್ ನನ್ನು, ಬೆಂಗಳೂರಿನ ಸೈಬರ್ ರ್ಕ್ರೈಂ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಮೂಲದ ಮಲ್ಲಿ ಅರ್ಜುನ್ ಬಂಧಿತ ಆರೋಪಿ. ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದ  ಮಲ್ಲಿ ಅರ್ಜುನ್,  ‘ಒಂದು ಗಂಜಿ ಗಿರಾಕಿಯ ಹೆಣ ಬಿತ್ತು’ ‘ಮಿಕ್ಕ ಗಂಜಿ ಗಿರಾಕಿಗಳಿಗೂ ಇದೇ ಗತಿ’ ‘#ಗೌರಿ_ಲಂಕೇಶ್ ಮಟ್ಯಾಷ್’ ಎಂದು ಫೇಸ್ ಬುಕ್ ನಲ್ಲಿ ಸ್ಟೇಟಸ್ ಹಾಕಿದ್ದ. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು, ಅವಹೇಳನಕಾರಿ ಪೋಸ್ಟ್ ಹಾಕಿದ್ದ ಮಲ್ಲಿ ಅರ್ಜುನ್ ನನ್ನು ಬಂಧಿಸಿ, ಜಡ್ಜ್ ಮುಂದೆ ಹಾಜರುಪಡಿಸಿದ್ದಾರೆ. ಅಲ್ಲದೇ ಹೆಚ್ಚಿನ ವಿಚಾರಣೆಗಾಗಿ ಪೊಲೀಸರು ಅರ್ಜುನ್ ನನ್ನು ವಶಕ್ಕೆ ಪಡೆದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ