ರೈಲಿಗೆ ಸಿಲುಕಿ ಪಿಡಿಒ ಸಾವು

Kannada News

08-09-2017 324

ಕಲಬುರಗಿ: ರೈಲಿಗೆ ಸಿಲುಕಿ ಪಿಡಿಒ ಸಾವನ್ನಪ್ಪಿರುವ ದಾರುಣ ಘಟನೆಯು, ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೇಡಂ ತಾಲ್ಲೂಕಿನ ಕುರುಕುಂಟಾ ಗ್ರಾಮದ ರೈಲ್ವೆ ಕ್ರಾಸಿನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಟಗೇರಾ ಗ್ರಾಮ ಪಂಚಾಯತಿ ಪಡಿಒ ಆಗಿದ್ದ ನಾಗಪ್ಪ ಮೃತ ದುರ್ದೈವಿ. ಈತ ಕುರಕುಂಟಾ ಗ್ರಾಮದ ನಿವಾಸಿಯಾಗಿದ್ದಾರೆ. ರೈಲ್ವೆ ಟ್ರಾಕ್ ಮೇಲೆ ಫೋನ್ ನಲ್ಲಿ ಮಾತನಾಡುತ್ತಾ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಲೋಕಮಾನ್ಯ ತಿಲಕ್ ಎಕ್ಸ್ ಪ್ರೆಸ್  ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ