ಲಾರಿ ಡಿಕ್ಕಿ: ಬೈಕ್ ಸವಾರ ದುರ್ಮರಣ !

Kannada News

08-09-2017

ಕೋಲಾರ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯು ಕೋಲಾರ ಜಿಲ್ಲೆಯ ಮಾಲೂರಿನ ಥಿಯೇಟರ್ ಸರ್ಕಲ್ ಬಳಿ ನಡೆದಿದೆ. ಬೈಕ್ ಸವಾರ ಚಂದ್ರು (28) ಮೃತ ವ್ಯಕ್ತಿ. ಈತ ಮಾಲೂರಿನ ಅಬ್ಬೇನಹಳ್ಳಿ ನಿವಾಸಿ ಎಂದು ತಿಳಿದು ಬಂದಿದೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ