ಭೀಕರ ರಸ್ತೆ ಅಪಘಾತ: 6 ಜನ ಸಾವು !

Kannada News

08-09-2017

ಬಾಗಲಕೋಟೆ: ಕ್ರೂಸರ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆಯು ಬಾಗಲಕೋಟೆ ಜಿಲ್ಲೆಯಲ್ಲಿ ಸಂಭವಿಸಿದೆ. ಅಲ್ಲದೇ ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಬೀಳಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಮೃತರೆಲ್ಲರೂ ಕ್ರೂಸರ್ ನಲ್ಲಿದ್ದವರು ಎಂದು ತಿಳಿದು ಬಂದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲ್ಲೂಕಿನ ಕೊರ್ತಿ ಕ್ರಾಸ್ ಬಳಿ ಈ ಭೀಕರ ಅಪಘಾತ ನಡೆದಿದೆ. ಮಹಾರಾಷ್ಟ್ರ ಪಾಸಿಂಗ್ ಇರುವ ಕ್ರೂಸರ್, ವಿಜಯಪುರದಿಂದ ಹುಬ್ಬಳ್ಳಿ ಮಾರ್ಗವಾಗಿ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ.ಬಸ್.ನಡುವೆ ಅಪಘಾವಾಗಿದೆ. ಸ್ಥಳಕ್ಕೆ ಬೀಳಗಿ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ