ಬಸ್ ನಿಲುಗಡೆಗಾಗಿ ಪ್ರತಿಭಟನೆ !

Kannada News

08-09-2017

ಕೋಲಾರ: ಬಸ್ ಗಳ ನಿಲುಗಡೆಗಾಗಿ ಕೋಲಾರ ತಾಲ್ಲೂಕಿನ ಅಮ್ಮೇರಹಳ್ಳಿಯ ಗ್ರಾಮಸ್ಥರು, ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು, ಗ್ರಾಮಸ್ಥರು ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಅಧಿಕಾರಿಗಳು ಆಗಮಿಸುವಂತೆ ಗ್ರಾಮಸ್ಥರ ಪಟ್ಟುಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ನಿಂದ ಸವಾರರು ಪರದಾಡಬೇಕಾಯಿತು, ಆದರೂ ಪಟ್ಟು ಬಿಡದ ಪ್ರತಿಭಟನಾಕಾರರು, ಬಸ್ ಗಳ ನಿಲುಗಡೆಗಾಗಿ ಪ್ರತಿಭಟನೆ ಮುಂದುವರೆಸಿದ್ದಾರೆ. ಬಸ್ ನಿಲುಗಡೆ ಇಲ್ಲದೆ ಗ್ರಾಮಸ್ಥರು ಮತ್ತು, ವಿದ್ಯಾರ್ಥಿಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಈ ಕೂಡಲೆ ಸಮಸ್ಯೆ ಕುರಿತು ಗಮನ ಹರಿಸುವಂತೆ ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ