ಸಿಎಂ ಆಗಮನಕ್ಕೆ ವಿರೋಧ: ಪ್ರತಿಭಟನೆ !

Kannada News

08-09-2017

ಮಂಡ್ಯ: ಕೇಂದ್ರ ಸರ್ಕಾರದ ಪುರಸ್ಕತ ಯೋಜನೆಗಳ ಉದ್ಘಾಟನೆಗೆ ಕೇಂದ್ರ ಸಚಿವರನ್ನು ಆಹ್ವಾನಿಸದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಡ್ಯದಲ್ಲಿ ಬಂಧಿಸಲಾಗಿದೆ. ಕೇಂದ್ರ ಪುರಸ್ಕøತ ಅಮೃತ್ ಯೋಜನೆಯಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಂದು ಇಂದು ಸಿಎಂ ಸಿದ್ದರಾಮಯ್ಯ ಮಂಡ್ಯಕ್ಕೆ ಆಗಮಿಸುತ್ತಿದ್ದಾರೆ. ಆದ್ರೆ, ಕೇಂದ್ರ ಸರ್ಕಾರದ ಕಾರ್ಯಕ್ರಮಕ್ಕೆ ಕೇಂದ್ರ ಸಚಿವರನ್ನು ಆಹ್ವಾನಿಸಿಲ್ಲ. ಕಾರ್ಯಕ್ರಮದ ಫ್ಲೆಕ್ಸ್‍ ನಲ್ಲಿ ಪ್ರಧಾನಿ ಮೋದಿ ಅವ್ರ ಭಾವಚಿತ್ರ ಹಾಕಿಲ್ಲ ಅಂತಾ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಪ್ರತಿಭಟನೆಸುತ್ತಿದ್ದ ಮಾಜಿ ಶಾಸಕ ಅಶ್ವಥ್ ನಾರಾಯಣ ಸೇರಿದಂತೆ 30ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ರು. ಈ ವೇಳೆ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ತಳ್ಳಾಟ, ನೂಕಟದಲ್ಲಿ ಕಾರ್ಯಕರ್ತರು ರಸ್ತೆಯಲ್ಲೇ ಬಿದ್ದು ಒದ್ದಾಡಿದ್ರು. ಇದ್ರಿಂದ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ