ಲಾರಿ ಅಪಘಾತ: ಚಾಲಕ ಸಾವು

Kannada News

08-09-2017

ಹುಬ್ಬಳ್ಳಿ: ಎರಡು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಥಳದಲ್ಲೇ ಒರ್ವ ಲಾರಿ ಚಾಲಕ ಮೃತಪಟ್ಟಿದ್ದು, ಮತ್ತೊಬ್ಬ ಲಾರಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಘಟನೆಯು ಹುಬ್ಬಳ್ಳಿ-ಗದಗ ರಸ್ತೆಯಲ್ಲಿ ನಡೆದಿದೆ. ರಾಜಸ್ತಾನ ಮೂಲದ ದಿಲೀಪ್ (35) ಮೃತ ಚಾಲಕ. ತಮಿಳುನಾಡು ಮೂಲದ ಲಾರಿ ಚಾಲಕ ಶರವಣ ಎಂಬಾತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹುಬ್ಬಳ್ಳಿ ಸಂಚಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ