ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ !

Kannada News

08-09-2017

ಚಿತ್ರದುರ್ಗ: ತೀವ್ರ ಜ್ವರದಿಂದ ಬಳಲುತ್ತಿದ್ದ, ಬಾಲಕಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಬಾಲಕಿ ಮೃತಪಟ್ಟಿದ್ದಾಳೆ. ಘಟನೆಯು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಸಂಧ್ಯಶ್ರೀ(11) ಮೃತ ಬಾಲಕಿ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕು, ದುಗ್ಗಾವರ ಕೆರೆಹಿಂದಲಹಟ್ಟಿ ನಿವಾಸಿ ಕ್ಯಾಸಮ್ಮ ಮತ್ತು ಚಿತ್ತಯ್ಯ ದಂಪತಿಗಳ ಪುತ್ರಿ ಸಂದ್ಯಶ್ರೀ. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಯನ್ನು, ಇಂದು ಬೆಳಗ್ಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಸೂಕ್ತ ಸಮಯಕ್ಕೆ ವೈದ್ಯರು, ಚಿಕಿತ್ಸೆ ನೀಡದ ಕಾರಣ ಬಾಲಕಿ ಸಾವನ್ನಪ್ಪಿರುವ ಬಗ್ಗೆ ಪೋಷಕರ ಆರೋಪಿಸಿದ್ದಾರೆ. ಜ್ವರ ನೆತ್ತಿಗೆ ಏರಿದ ಪರಿಣಾಮ ಬಾಲಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ಬಾಲಕಿಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ