ದನದ ಮಾಂಸ: ಗೂಡ್ಸ್ ವಾಹನ ಜಪ್ತಿ !

Kannada News

09-09-2017 435

ಧಾರವಾಡ: ದನದ ಮಾಂಸ ಸಾಗಿಸುತ್ತಿದ್ದ ಗೂಡ್ಸ್ ವಾಹನವನ್ನು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು, ತಡೆದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆಯು ಧಾರವಾಡ ತಾಲ್ಲೂಕಿನ ಅಳ್ನಾವರ ಪಟ್ಟಣದಲ್ಲಿ ನಡೆದಿದೆ. ತಡರಾತ್ರಿ ದನದ ಮಾಂಸ ಸಾಗಿಸುತ್ತಿದ್ದ ಗೋವಾ ಮೂಲದ ಗೂಡ್ಸ್ ವಾಹನವನ್ನು ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಇನ್ನು ಪೊಲೀಸರು ಸ್ಥಳಕ್ಕಾಗಮಿಸಿ ವಾಹನವನ್ನು ಜಪ್ತಿ ಮಾಡಿದ್ದಾರೆ. ಮತ್ತು ಬಾಬು ಮೀಯಾ, ಇಸ್ಮಾಯಿಲ್ ಎಂಬುವರನ್ನು ಬಂಧಿಸಿದ್ದಾರೆ. ಬಾಬು ಮೀಯಾ, ಗೋವಾ ಮೂಲದ ಮಾಂಸ ವ್ಯಾಪಾರಿ. ಇಸ್ಮಾಯಿಲ್, ಅಳ್ನಾವರ ಪಟ್ಟಣದ ಮಾಂಸ ಮಾರಾಟಗಾರ. ಅಳ್ನಾವರದಿಂದ ಗೋವಾಕ್ಕೆ ಹೋಗುತ್ತಿದ್ದ ಗೂಡ್ಸ್ ವಾಹನವನ್ನು ಜಪ್ತಿ ಮಾಡಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ