ಖಿನ್ನತೆ: ವ್ಯಕ್ತಿ ನೇಣಿಗೆ ಶರಣು

Kannada News

09-09-2017

ಮೈಸೂರು: ಕುಡಿತದ ಚಟಕ್ಕೆ ದಾಸನಾಗಿದ್ದ ವ್ಯಕ್ತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆಯು ಮೈಸೂರಿನಲ್ಲಿ ನಡೆದಿದೆ. ರವಿ ಅಲಿಯಾಸ್ ಸೈಲೆಂಟ್ ರವಿ (36) ಮೃತ ವ್ಯಕ್ತಿ. ಮೈಸೂರಿನ ಯರಗನಹಳ್ಳಿಯಲ್ಲಿ ಘಟನೆ ಸಂಭವಿಸಿದ್ದು, ಈತ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದು ಬಂದಿದೆ. ತಂದೆ-ತಾಯಿಯ ಅಗಲಿಕೆಯಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದರು ಎಂದೂ ಹೇಳಲಾಗುತ್ತಿದೆ. ಪ್ರಕರಣ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ