ವೈದ್ಯರಿಲ್ಲದೆ: ರೋಡಿಗಿಳಿದ ರೋಗಿಗಳು !

Kannada News

09-09-2017

ಗದಗ: ಸರ್ಕಾರಿ ಆಸ್ಪತ್ರೆಗಳ ಸಮಸ್ಯೆಗಳು ಒಂದೆರಡಲ್ಲಿ, ವೈದ್ಯರಿರುವಾಗಲೇ ಆಸ್ಪತ್ರೆಗಳಲ್ಲಿ ರೋಗಿಗಳು ಅನೇಕ ಸಮಸ್ಯೆಗಳನ್ನು ಎದುರಿಸುವಾಗ, ಇನ್ನು ವೈದ್ಯರೇ ಇಲ್ಲದೇ ಇದ್ದರೆ ಹೇಗೆ ? ಹೌದು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಇಲ್ಲದ ಕಾರಣ ರೋಗಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಗದಗ ಜಿಲ್ಲೆಯ ರೋಣ ಪಟ್ಟಣದ, ತಾಲ್ಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರು ಇಲ್ಲದೆ ರೋಗಿಗಳು ಚಿಕಿತ್ಸೆಗಾಗಿ ಪರದಾಡುತ್ತಿದ್ದು, ಆಸ್ಪತ್ರೆ ಮತ್ತು ಸಂಭಂದ ಪಟ್ಟ ಅಧಿಕಾರಿಗಳ ವಿರುದ್ಧ ರೋಗಿಗಳು, ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕೂಡಲೆ ಅಧಿಕಾರಿಗಳು ಇತ್ತ ಗಮನ ಹರಿಸಿ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ